ಪುಲ್ವಾಮಾದಲ್ಲಿ ಸೇನಾ ವಾಹನದ ಮೇಲೆ ಮತ್ತೆ ಉಗ್ರರ ದಾಳಿ, ಐಇಡಿ ಸ್ಫೋಟ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರು ಸೇನಾ ವಾಹನವನ್ನು ಟಾರ್ಗೆಟ್ ಮಾಡಿ ಐಇಡಿ ಸ್ಫೋಟಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಜಾಹಿದ್‌ಬಾಗ್ ಗ್ರಾಮದಲ್ಲಿರುವ 55 ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ಈ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ದಾಳಿಯ ಬಳಿಕ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಫೆಬ್ರವರಿ 14 ರಂದು ಜಿಲ್ಲೆಯ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ