ಹುಬ್ಬಳ್ಳಿ,ಆ,4- ನಾನು ಯಾವುದೇ ಸ್ಥಾನದ ನಿರೀಕ್ಷೆಯಲ್ಲಿ ಇಲ್ಲ. ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾನು ಯಾವುದೇ ಸಚಿವ ಸ್ಥಾನ ಕೇಳಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟದ್ದು ಆದ್ದರಿಂದ ಬಿ.ಎಸ್.ಯಡಿಯೂರಪ್ಪನವರು ನಾಳೆ ಅಥವಾ ನಾಡಿದ್ದು ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದು, ಹೈಕಮಾಂಡ್‍ನ ನಿರ್ದೇಶನದಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದರು.
ಉಪ ಮುಖ್ಯಮಂತ್ರಿ ಸ್ಥಾನ ನೇಮಕ ಮಾಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟದ್ದು ಈ ಬಗ್ಗೆ ನಾನೇನು ಹೇಳಲಾರೆ ಎಂದು ಜಾರಿಕೊಂಡರು. ಅಲ್ಲದೇ ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಉತ್ತರ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇನ್ನು ಉತ್ತರ ಕರ್ನಾಟಕ ಭಾಗದವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಹ ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು ಎಂದ ಅವರು, ಉತ್ತರ-ದಕ್ಷಿಣ ಎನ್ನುವ ಭೇದ ಭಾವ ಇಲ್ಲ ಸಮಗ್ರ ಕರ್ನಾಟಕ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಶ್ರಮಿಸಲಿದೆ ಎಂಬ ಆಶಾ ಭಾವನೆ ವ್ಯಕ್ತಪಡಿಸಿದರು.
ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿನ ನೆರೆ ಹಾವಳಿ ಕುರಿತು ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಬಿಜೆಪಿ ಸರ್ಕಾರ ಸ್ಪಂದಿಸಲಿದೆ ಈ ಹಿಂದೆ ಅನೇಕ ರೀತಿಯ ಪ್ರಕೃತಿ ವಿಕೋಪವಾದಾಗ ನಮ್ಮ ಪಕ್ಷ ಶ್ರಮಿಸಿದೆ ಎಂದರು.
ರೆಬಲ್‍ರು ಹೊಸ ಪಕ್ಷ ಹುಟ್ಟು ಹಾಕಬಹುದು:
ಅತೃಪ್ತ ಶಾಸಕರು ಹೊಸ ಪಕ್ಷವನ್ನ ಹುಟ್ಟು ಹಾಕಲೂಬಹುದು ಎಂದು ಜಗದೀಶ್ ಶೆಟ್ಟರ್ ಹೊಸ ಬಾಂಬ್ ಹಾಕಿದ್ದಾರೆ.
ಅತೃಪ್ತ ಶಾಸಕರು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥರಿದ್ದಾರೆ ಅವರಿಗೆ ಯಾವುದೇ ತಿಳುವಳಿಕೆ ಹೇಳಬೇಕಾಗಿಲ್ಲ.
ಅವರೊಂದಿಗೆ ನಮ್ಮ ನಾಯಕರು ಮಾತನಾಡಿದ್ದಾರೆ ಆದ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗುವುದಿಲ್ಲ ಇದು ಸುದ್ದ ಸುಳ್ಳು, ಎಂದು ನುಣುಚಿಕೊಂಡರು.