ನೆರೆ ಪೀಡಿತ ಪ್ರದೇಶಗಳ ಜನ ಮತ್ತು ಜಾನುವಾರುಗಳ ರಕ್ಷಣೆಗೆ ಆದ್ಯತೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.4- ಪ್ರವಾಹ ಪೀಡಿತ ಪ್ರದೇಶಗಳ ಜನರ ರಕ್ಷಣೆಗೆ ಜಿಲ್ಲಾಡಳಿತಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತಗಳ ಜತೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ನೆರೆ ಪೀಡಿತ ಪ್ರದೇಶಗಳ ಜನ ಮತ್ತು ಜಾನುವಾರುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕೆಂದು ನಿರ್ದೇಶನ ನೀಡಿದರು.

ಸ್ಥಳಾಂತರಗೊಂಡ ನೆರೆ ಪೀಡಿತ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು.ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ತಕ್ಷಣವೇ ಗಂಜಿ ಕೇಂದ್ರಗಳನ್ನು ತೆರೆದು ಗುಣಮಟ್ಟದ ಆಹಾರ ಒದಗಿಸಲು ಸೂಚನೆ ನೀಡಿದರು.

ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ನಷ್ಟ , ಆಸ್ತಿ-ಪಾಸ್ತಿ ಹಾನಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿದ ಜನರನ್ನು ಸರ್ಕಾರಿ ಶಾಲೆಯಂತಹ ಸುರಕ್ಷಿತ ಸ್ಥಳಗಳಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ