ಮಾಜಿ ಪಿಎಂ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರಿಂದ ಮಹತ್ವ ಸಮಾಲೋಚನೆ

ಬೆಂಗಳೂರು, ಆ.4- ಮುಂಬರುವ ಉಪಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು.

ಪದ್ಮನಾಭನಗರದ ಮನೆಯಲ್ಲಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾದರೆ ಪಕ್ಷ ಕೈಗೊಳ್ಳಬೇಕಾದ ನಿಲುವಿನ ಬಗ್ಗೆ ದೇವೇಗೌಡರೊಂದಿಗೆ ಚರ್ಚಿಸಿದರು.

ಉಪಚುನಾವಣೆ ಘೋಷಣೆಯಾದರೆ ಯಾವ ಕ್ಷೇತ್ರಗಳಿಗೆ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಯಾವ ತಂತ್ರ ಅನುಸರಿಸಬೇಕು ಹಾಗೂ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಗಂಭೀರ ಸಮಾಲೋಚನೆ ನಡೆಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಿನ್ನೆಯಷ್ಟೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಕುಮಾರಸ್ವಾಮಿ ನಡೆಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

ಮಾತುಕತೆ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ