ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ 5 ಐತಿಹಾಸಿಕ ನಿರ್ಧಾರಗಳು!

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸುವ ಮಸೂದೆಯನ್ನು ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯ ಎಲ್ಲಾ ಷರತ್ತುಗಳು ಅನ್ವಯಿಸುವುದಿಲ್ಲ ಎಂದು ಅವರು ಹೇಳಿದರು. ಇದರೊಂದಿಗೆ, ಕಲಂ 35-ಎ ಅನ್ನು ಸಹ ತೆಗೆದುಹಾಕಲಾಗಿದೆ.

ಜಮ್ಮುಕಾಶ್ಮೀರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ 5 ಐತಿಹಾಸಿಕ ನಿರ್ಧಾರಗಳ ಬಗ್ಗೆ ತಿಳಿಯೋಣ

ಮೊದಲ ನಿರ್ಧಾರ ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ವಿಧೇಯಕ ಮಂಡಿಸಿದ ಕೇಂದ್ರ ಸರ್ಕಾರ.

ಎರಡನೇ ನಿರ್ಧಾರ – ಜಮ್ಮು ಮತ್ತು ಕಾಶ್ಮೀರದ 35 ಎ ವಿಧಿ ಸಹ ಸಂಪೂರ್ಣವಾಗಿ ರದ್ದುಗೊಳಿಸುವ ಮಸೂದೆ ಮಂಡನೆ.

ಮೂರನೇ ನಿರ್ಧಾರ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

ನಾಲ್ಕನೇ ನಿರ್ಧಾರ – ಜಮ್ಮು ಮತ್ತು ಕಾಶ್ಮೀರ ಈಗ ವಿಧಾನಸಭೆ ಒಳಗೊಂಡಿರುವ ಕೇಂದ್ರಾಡಳಿತ ಪ್ರದೇಶವಾಗಲಿದೆ.

ಐದನೇ ನಿರ್ಧಾರ – ಲಡಾಖ್ ಗೆ ಈಗ ಕೇಂದ್ರಾಡಳಿತ ಸ್ಥಾನಮಾನ. ಲಡಾಖ್ ಈಗ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ