ನಗರದಲ್ಲಿ ಹೆಚ್ಚುತ್ತಿರುವ ಮಾರಣಾಂತಿಕ ಡೇಂಘಿ ಪ್ರಕರಣಗಳು

ಬೆಂಗಳೂರು,ಆ.5- ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾರಣಾಂತಿಕ ಡೇಂಘಿ ಪ್ರಕರಣಗಳು ಬಿಬಿಎಂಪಿಯ ನಿದ್ದೆಗೆಡಿಸಿವೆ.
ಸಮಪರ್ಕವಾಗಿ ಮಳೆ ಬೀಳದ ಹಿನ್ನೆಲೆಯಲ್ಲಿ ನಿಂತ ನೀರಿನಲ್ಲಿ ಈಡಿಸ್ ಇಜಿಪ್ಟ್ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಸುಮಾರು 4 ಸಾವಿರ ಡೇಂಘಿ ಪ್ರಕರಣಗಳು ಬೆಳಕಿಗೆ ಬಂದಿದೆ.

ಡೇಂಘಿ ಕಾಯಿಲೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದರೂ ಸಹ ಸಾರ್ವಜನಿಕರು ಎಚ್ಚೆತ್ತುಕೊಂಡಿಲ್ಲ ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ 200 ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಡೇಂಘಿ ಕುರಿತು ಅರಿವು ಮೂಡಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದ್ದಾರೆ.
ಡೇಂಘಿ ನಿಯಂತ್ರಣಕ್ಕೆ ಮನೆಯ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಜ್ವರ ಕಾಣಿಸಿಕೊಂಡರೆ ಕೂಡಲೇ ಪಾಲಿಕೆ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಾಥಾ ನಡೆಸಿ ಮನವಿ ಮಾಡಿದ್ದರೂ ಕೂಡ ಸಾರ್ವಜನಿಕರಲ್ಲಿ ಅರಿವು ಮೂಡಿಲ್ಲ. ಡೇಂಘಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ 200 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.ಇವರು ಇಂದಿನಿಂದ 8 ವಲಯಗಳಲ್ಲೂ ಸಹ ಆಟೋ ಮೂಲಕ ಮಾರಣಾಂತಿಕ ಡೇಂಘಿ ಕುರಿತು ಅರಿವು ಮೂಡಿಸಲಿದ್ದಾರೆ ಎಂದರು.
ಜ್ವರ ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಳ್ಳಬೇಕು, ಪಾಲಿಕೆ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆಯಿದ್ದು, ಚಿಕಿತ್ಸೆ ಮಾಡಿಕೊಳ್ಳಬೇಕು, ಮನೆಯ ಮುಂದೆ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಅಲ್ಲದೆ ಮಧ್ಯಾಹ್ನದ ವೇಳೆ ಕಚ್ಚುವ ವೇಳೆ ಸೊಳ್ಳೆಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ