ಬೆಂಗಳೂರು,ಆ.5- ಅತಿವೇಗವಾಗಿ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಜಕ್ಕೂರು ಲೇಔಟ್ ನಿವಾಸಿ ಮಧುಸೂದನ್(34) ಮೃತಪಟ್ಟ ಬೈಕ್ ಸವಾರನಾಗಿದ್ದು, ಹಿಂಬಂದಿ ಸವಾರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಮಧುಸೂದನ ಇಂದು ಮುಂಜಾನೆ 1 ಗಂಟೆ ಸುಮಾರಿನಲ್ಲಿ ಬಿಬಿರಸ್ತೆಯ ಬ್ಯಾಟರಾಯನಪುರ ಸರ್ಕಲ್ ಬಳಿ ಸ್ನೇಹಿತರೊಂದಿಗೆ ಹೋಗುತ್ತಿದ್ದರು.
ಈ ವೇಳೆ ಅತಿವೇಗವಾಗಿ ಬಂದ ಕಾರೊಂದು ಮಧುಸೂದನ್ ಬೈಕ್ಗೆ ಅಪ್ಪಳಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ಸುದ್ದಿ ತಿಳಿದು ಹೆಬ್ಬಾಳ ಸಂಚಾರ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.