ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ
ದೆಹಲಿ: ಕೇಂದ್ರದ ಮಾಜಿ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಮಂಗಳವಾರ ನಿಧನರಾಗಿದ್ದಾರೆ.ಮಂಗಳವಾರ ರಾತ್ರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತು. ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘ಸುಷ್ಮಾ ಸ್ವರಾಜ್ ಉತ್ತಮ ಸಂಸದೀಯಪಟು. ಪಕ್ಷದಲ್ಲಿ ಅವರು ಮೆಚ್ಚುಗೆ ಹಾಗೂ ಪೂಜನೀಯ ಸ್ಥಾನ ಪಡೆದಿದ್ದರು. ಬಿಜೆಪಿಯ ಸಿದ್ಧಾಂತದ ವಿಚಾರದಲ್ಲಿ ಅವರು ಯಾವುದಕ್ಕೂ ರಾಜಿಯಾಗುತ್ತಿರಲಿಲ್ಲ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.