
ನವದೆಹಲಿ, ಆ.8- ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370ನೇ ವಿಧಿ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ಧುಗೊಳಿಸಿರುವ ರಾಷ್ಟ್ರಪತಿ ರಾಮನಾಥ್ಕೋವಿಂದ್ ಅವರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಹಿರಿಯ ವಕೀಲ ಕೆ.ಎನ್.ಶರ್ಮಾ ಈ ಸಂಬಂಧ ನ್ಯಾಯಮೂರ್ತಿ ರಮಣ ಅವರ ಮುಂದೆ ಈ ಅರ್ಜಿ ಸಲ್ಲಿಸಿದ್ದಾರೆ. 370ನೇ ವಿಧಿ ರದ್ದುಗೊಳಿಸಿರುವ ರಾಷ್ಟ್ರಪತಿ ಅವರ ಆದೇಶದ ವಿರುದ್ಧ ಸಲ್ಲಿಸಿರುವ ಅರ್ಜಿಯನ್ನು ಆ. 12 ಅಥವಾ 13ರಂದು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಶರ್ಮಾ ಕೋರಿದ್ದಾರೆ.
ಆದರೆ ಈ ಅರ್ಜಿ ತುರ್ತು ವಿಚಾರಣೆ ನಡೆಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ ಕಲಾಪದ ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದೆ.
ಇದೇ ವೇಳೆ ಕಾಶ್ಮೀರ ಕಣಿವೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧ/ ಕಫ್ರ್ಯೂ ಮತ್ತು ಇತರ ಕಠಿಣ ಕ್ರಮಗಳನ್ನು ತೆರವುಗೊಳಿಸಿ ವಶದಲ್ಲಿರುವ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರಿ ಕಾಂಗ್ರೆಸ್ ನಾಯಕ ತಹ್ಸೀನ್ ಪೂನಾವ್ಲಾ ತುರ್ತು ವಿಚಾರಣೆಗೆ ಒತ್ತಾಯಿಸಿದ್ದಾರೆ. ಆದರೆ ಈ ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದೆ.