ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ ಹಿನ್ನಲೆ-ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ

ನವದಹೆಲಿ, ಆ.8-ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರ ಅಲ್ಲಿ ನಿರ್ಬಂಧಗಳು ಮತ್ತು ಇತರೆ ಕಠಿಣ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವುದರ ವಿರುದ್ಧ ಸುಪ್ರೀಂಕೋರ್ಟ್‍ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ಕಾಂಗ್ರೆಸ್ ಮುಖಂಡ ಸಹಸೀನ್ ಪೂನಾವಾಲಾ ಈ ಸಂಬಂಧ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಮನವಿಯ ತುರ್ತು ವಿಚಾರಣೆ ನಡೆಸಬೇಕೆಂದು ಕೋರಿದ್ದಾರೆ.

ಕಫ್ರ್ಯೂ/ನಿರ್ಬಂಧಗಳು ಹಾಗೂ ದೂರವಾಣಿ ಸಂಪರ್ಕ, ಇಂಟರ್‍ನೆಟ್ ಮತ್ತು ಸುದ್ದಿವಾಹಿನಿಗಳ ಸ್ಥಗಿತ ಸೇರಿದಂತೆ ಇತರ ಕಠಿಣ ಕ್ರಮಗಳನ್ನು ಹಿಂದಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಗೃಹಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ, ಮುಫ್ತಿ ಮೆಹಬೂಬಾ ಸೇರಿದಂತೆ ಇತರ ಬಂಧಿತ ಮುಖಂಡರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆವರು ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ