ಬಿಜೆಪಿಯ ಜನಪ್ರತಿನಿಧಿಗಳು ಒಂದು ತಿಂಗಳ ವೇತನವನ್ನು ಸಂತ್ರಸ್ಥರಿಗೆ ನೀಡಬೇಕು-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.9- ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ತಮ್ಮ ಒಂದು ತಿಂಗಳ ವೇತನವನ್ನು ನೆರೆ ಸಂತ್ರಸ್ತರಿಗೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

25 ಸಂಸದರು, ರಾಜ್ಯಸಭಾ ಸದಸ್ಯರು, 105 ಶಾಸಕರು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಮಹಾನಗರ ಪಾಲಿಕೆ, ಪಟ್ಟಣ್ಣ ಪಂಚಾಯ್ತಿ, ಪುರಸಭೆ ಸೇರಿದಂತೆ ಜನಪ್ರತಿನಿಧಿಗಳು ಒಂದು ತಿಂಗಳ ವೇತನವನ್ನು ನೀಡುವ ಮೂಲಕ ಸಂತ್ರಸ್ತರ ಸಂಕಷ್ಟಕ್ಕೆ ನೆರವಾಗುವಂತೆ ಕೋರಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಜನಪ್ರತಿನಿಧಿಗಳು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಬರ ಪರಿಹಾರ ನಿಧಿಗೆ ನೀಡಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

ಈಗಾಗಲೇ ಬಿಬಿಎಂಪಿ ಸದಸ್ಯರು ಹಾಗೂ ನೌಕರರ ಸಿಬ್ಬಂದಿ ವರ್ಗ ಒಂದು ತಿಂಗಳ ವೇತನವನ್ನು ಬರ ಪರಿಹಾರಕ್ಕೆ ನೀಡುವುದಾಗಿ ಘೋಷಿಸಿದ್ದಾರೆ.

ಸಂಘಸಂಸ್ಥೆಗಳು, ಕೈಗಾರಿಕೋದ್ಯಮಿಗಳು, ಉದ್ಯಮಿಗಳು, ಸಾರ್ವಜನಿಕರು, ಮಠಮಾನ್ಯಗಳು ಉದಾರವಾಗಿ ದೇಣಿಗೆ ನೀಡುವಂತೆ ಬಿಎಸ್‍ವೈ ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ