ಬೆಂಗಳೂರು,ಆ.9- ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ನೆರೆ ಸಂತ್ರಸ್ತರ ನೆರವಿಗೆ ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಒಂದು ತಿಂಗಳ ವೇತನವನ್ನು ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ.
ಈಗಾಗಲೇ ಪಕ್ಷದ ಎಲ್ಲಾ ಜನಪ್ರತಿನಿಧಿಗಳಿಗೂ ಪತ್ರ ಬರೆದಿದ್ದು, ಒಂದು ತಿಂಗಳ ವೇತನ ನೀಡಲು ಸಲಹೆ ನೀಡಿದ್ದೇನೆ. ಅದೇ ರೀತಿ ಪಕ್ಷದ ಪದಾಧಿಕಾರಿಗಳು ಕೂಡ ಕೆಪಿಸಿಸಿಯ ಸಂತ್ರಸ್ತರ ಪರಿಹಾರ ನಿಧಿಗೆ ಹೆಚ್ಚಿನ ನೆರವು ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದರು.