ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ ಹಿನ್ನೆಲೆ- ಮೇಯರ್ ಕಪ್ ಬ್ಯಾಡ್ಮಿಂಟನ್ ಲೀಗ್ ಪಂದ್ಯಾವಳಿ ಮುಂದೂಡಿಕೆ

ಬೆಂಗಳೂರು, ಆ.9- ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಿನ್ನೆಲೆಯಲ್ಲಿ ಇಂದು ಸಂಜೆ ಹಮ್ಮಿಕೊಳ್ಳಲಾಗಿದ್ದ ಶ್ರೀ ಶಿವಕುಮಾರಸ್ವಾಮೀಜಿ ಶೆಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಹಾಗೂ ಮೇಯರ್ ಕಪ್ ಬ್ಯಾಡ್ಮಿಂಟನ್ ಲೀಗ್ ಪಂದ್ಯಾವಳಿಯನ್ನು ಮುಂದೂಡಲಾಗಿದೆ.

ಇಂದು ಸಂಜೆ 5 ಗಂಟೆಗೆ ವಾರ್ಡ್ 153ರ ಕೃಷ್ಣರಾವ್ ಪಾರ್ಕ್‍ನಲ್ಲಿ ಪೂಜ್ಯ ಶ್ರೀ ಶಿವಕುಮಾರಸ್ವಾಮೀಜಿ ಶೆಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ, ಶ್ರೀಗಳ ಕಂಚಿನ ಪ್ರತಿಮೆ ಅನಾವರಣ ಮತ್ತು ಇತರೆ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜೊತೆಗೆ ಕ್ರಿಯೇಟಿವ್ ಸ್ಪೋಟ್ರ್ಸ್ ಮತ್ತು ಪ್ರೀಮಿಯರ್ ಬ್ಯಾಡ್ಮಿಂಟನ್ ಅಕಾಡೆಮಿ ಸಹಭಾಗಿತ್ವದಲ್ಲಿ ಮೇಯರ್ ಕಪ್, ಬ್ಯಾಡ್ಮಿಂಟನ್ ಲೀಗ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪ ಈ ಕಾರ್ಯಕ್ರಮಗಳನ್ನು ಉದ್ಘಾಟಿಸಬೇಕಿತ್ತು. ಆದರೆ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡಿರುವುದರಿಂದ ಮತ್ತು ಆ ಭಾಗದ ಜನರ ಆಸರೆಗೆ ನಿಲ್ಲಬೇಕಿರುವ ಹಿನ್ನೆಲೆಯಲ್ಲಿ ಈ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಿರುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದ್ದಾರೆ.

ಗೌರವಧನ: ನೆರೆಪೀಡಿತ ಪ್ರದೇಶದ ಜನರ ದುಃಖದುಮ್ಮಾನಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಿಬಿಎಂಪಿಯ ಎಲ್ಲ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ಸಹಾಯರ್ಥವಾಗಿ ನೀಡಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ