ಕ್ವಿಟ್ ಇಂಡಿಯಾ ಚಳುವಳಿಗೆ ಇಂದು 77ನೇ ವರ್ಷಾಚರಣೆ

ನವದೆಹಲಿ, ಆ.9- ಭಾರತ ಸ್ವಾತಂತ್ರ ಸಂಗ್ರಾಮದ ಮಹತ್ವದ ಹೋರಾಟಗಳಲ್ಲಿ ಅತ್ಯಂತ್ರ ಪ್ರಮುಖವಾದ ಕ್ವಿಟ್ ಇಂಡಿಯಾ (ಭಾರತ ಬಿಟ್ಟು ತೊಲಗಿ)ಚಳುವಳಿಗೆ ಇಂದು 77ನೇ ವರ್ಷಾಚರಣೆ.

ಈ ನಿಮಿತ್ತ ರಾಷ್ಟ್ರಪತಿ ರಾಮನಾಥ್‍ಕೋವಿಂದ್, ಉಪರಾಷ್ಟ್ರಪತಿ ಎಮ್.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಗಣ್ಯರು ಸ್ವಾತಂತ್ರ ಯೋಧರಿಗೆ ನಮನ ಸಲ್ಲಿಸಿದರು.

ಸ್ವಾತಂತ್ರ ಯೋಧರ ಹೋರಾಟ, ತ್ಯಾಗ, ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಅವರ ಸೇವೆ ಎಂದೆಂದಿಗೂ ಸ್ಮರಣಿಯ ಎಂದು ಗಣ್ಯರು ಗುಣಗಾನ ಮಾಡಿದ್ದಾರೆ.

ಬಾಂಬೆಯಲ್ಲಿ 1942ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಕ್ವಿಟ್ ಇಂಡಿಯಾ ಅಥವಾ ಆಗಸ್ಟ್ ಚಳುವಳಿ ನಿರ್ಧಾರವನ್ನು ಘೋಷಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ