ಬೆಂಗಳೂರು, ಆ.10- ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘ 150 ಕೋಟಿ ರೂ. ದೇಣಿಗೆ ನೀಡಲು ನಿರ್ಧರಿಸಿದೆ.
ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ , ಅತಿವೃಷ್ಟಿ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ 150 ಕೋಟಿ ರೂ. ದೇಣಿಗೆ ನೀಡಲು ನಿರ್ಧರಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸುಮಾರು 5.50 ಲಕ್ಷ ಸರ್ಕಾರಿ ನೌಕರರಿದ್ದು , ಎಲ್ಲಾ ನೌಕರರು ತಮ್ಮ ಒಂದು ದಿನದ ವೇತನವನ್ನು ಪರಿಹಾರವಾಗಿ ನೀಡಲು ತೀರ್ಮಾನಿಸಿದ್ದಾರೆ.
ಎಲ್ಲಾ ನೌಕರರಿಂದ ಸುಮಾರು 150 ಕೋಟಿ ರೂ. ದೇಣಿಗೆ ಸಂಗ್ರಹವಾಗಲಿದ್ದು , ಶೀಘ್ರದಲ್ಲಿಯೇ ಪರಿಹಾರ ಧನವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಷಡಕ್ಷರಿ ತಿಳಿಸಿದರು.