ನವದೆಹಲಿ: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಅವರಿಗೆ ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ವಿಶೇಷ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಈಗ ಜೇಟ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿ ಹಲವು ರಾಜಕೀಯ ಮುಖಂಡರು ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.
ಅರುಣ್ ಜೇಟ್ಲಿ ಮೂಲತಃ ವಕೀಲರಾಗಿದ್ದು, ನರೇಂದ್ರ ಮೋದಿಉವರ ಸಚಿವ ಸಂಪುಟದಲ್ಲಿ ಪ್ರಭಾವಿ ನಾಯಕರಾಗಿದ್ದವರು. ಜತೆಗೆ ಮೋದಿ ಸರ್ಕಾರದ ಟ್ರಬಲ್ ಶೂಟರ್ ಎಂದೂ ಕರೆಸಿಕೊಂಡಿದ್ದಾರೆ.
2019ರ ಜನವರಿಯಲ್ಲಿ ಜೇಟ್ಲಿ ಅಮೆರಿಕಾದಲ್ಲಿ ಎಡಗಾಲಿನಲ್ಲಿ ಆಗಿದ್ದ ಸಾಫ್ಟ್ ಟಿಶ್ಯು ಕ್ಯಾನ್ಸರ್ ಆಪರೇಷನ್ಗೆ ಒಳಗಾಗಿದ್ದರು. ಮೋದಿ ಸರ್ಕಾರದ ಆರನೇ ಮತ್ತು ಕೊನೆಯ ಬಜೆಟ್ ಮಂಡನೆ ಮಾಡಲೂ ಸಾಧ್ಯವಾಗದೇ ಪೀಯುಷ್ ಗೋಯಲ್ ಬಜೆಟ್ ಮಂಡಿಸಿದ್ದರು. ಮೋದಿ ನೇತೃತ್ವದ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿ ಅಧಿಕಾರಕ್ಕೆ ಬಂದಾಗ ಜೇಟ್ಲಿ ಅವರೇ ಸಚಿವ ಸಂಪುಟದಿಂದ ದೂರ ಉಳಿಯುವ ನಿರ್ಧಾರವನ್ನು ತಿಳಿಸಿದ್ದರು.