ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ!

ನವದಹೆಲಿಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ಹೊಸ ಅಧ್ಯಕ್ಷರ ನೇಮಕದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವುದು ಸಭೆಯ ಮುಖ್ಯ ಅಜೆಂಡಾ ಆಗಿದೆ.

ಮೂಲಗಳ ಪ್ರಕಾರ, ಸಿಡಬ್ಲ್ಯುಸಿಯಲ್ಲಿ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷರನ್ನು ಆಯ್ಕೆ ಮಾಡಬಹುದು. ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮಾತನಾಡಿ, ಕಾಂಗ್ರೆಸ್ ನಾಯಕರು ಕೂಡ ಅಧ್ಯಕ್ಷ ಹುದ್ದೆಯ ಬಗ್ಗೆ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಯಸುತ್ತಾರೆ. ಶನಿವಾರ ಈ ವಿಷಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ನಂತರ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದಿನಿಂದ, ಕಾಂಗ್ರೆಸ್ ತನ್ನ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಕಸರತ್ತಿನಲ್ಲಿ ತೊಡಗಿದೆ. ಪಕ್ಷದ ಹೊಸ ಅಧ್ಯಕ್ಷರ ರೇಸ್ ನಲ್ಲಿ ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ್ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಮುಂಚೂಣಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಮತ್ತೊಂದೆಡೆ, ಪಕ್ಷದ ಹಿರಿಯ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಕ್ಷದ ಅಧ್ಯಕ್ಷರ ಜವಾಬ್ದಾರಿಯನ್ನು ಯುವ ನಾಯಕನಿಗೆ ವಹಿಸಿಕೊಡುವುದಾಗಿ ಈ ಹಿಂದೆ ಹೇಳಿದ್ದರು. ಆದರೆ, ನಂತರ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಪ್ರತಿಪಾದಿಸಿದರು. ಇನ್ನೂ ಅನೇಕ ಕಾಂಗ್ರೆಸ್ ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಅವರ ಹೆಸರನ್ನು ಪ್ರತಿಪಾದಿಸಿದ್ದಾರೆ.

ಪಕ್ಷದ ಹೊಸ ಅಧ್ಯಕ್ಷರಲ್ಲಿ ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ್ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಹಿರಿಯ ನಾಯಕರಿಗೆ ನೀಡಬೇಕೇ? ಅಥವಾ ಕಿರಿಯರಿಗೆ ಪಟ್ಟಾಭಿಷೇಕ ಮಾಡುವುದೇ ಎಂಬ ಬಗ್ಗೆಯೂ ಇಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ