ಕೇರಳ/ಮಲ್ಲಪುರಂ, ಆ. 12- ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ.
ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು.
ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ ಕುಸಿತದ ಭಗ್ನಾವಶೇಷದಲ್ಲಿ ಪತ್ತೆಯಾಯಿತು. ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ ಮತ್ತು ಮಗುವಿನ ಶವಗಳನ್ನು ಹೊರ ತೆಗೆಯುವಾಗ ರಕ್ಷಣಾ ಕಾರ್ಯಕರ್ತರ ಕಣ್ಣುಗಳು ನೀರಾದವರು.