ಟ್ರಕ್ ಉರುಳಿ ಏಳು ಮಂದಿ ಸಾವು

Varta Mitra News

ಬದೌನ್, ಆ.13-ಉತ್ತರಪ್ರದೇಶದ ಹೆದ್ದಾರಿಗಳು ಮೃತ್ಯಕೂಪಗಳಾಗಿ ಪರಿಣಮಿಸಿದ್ದು, ಬದೌನ್‍ನಲ್ಲಿ ಟ್ರಕ್ ಉರುಳಿ ಏಳು ಮಂದಿ ಮೃತಪಟ್ಟು, ಇತರ ಐವರು ತೀವ್ರ ಗಾಯಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

ಅತಿ ವೇಗವಾಗಿ ಚಲಿಸುತ್ತಿದ್ದ ಗೋಧಿ ಮೂಟೆಗಳಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಸಾವು-ನೋವು ಸಂಭವಿಸಿದೆ ಎಂದು ಹಿರಿಯ ಪೊಲೀಸ್
ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ರಸ್ತೆ ಬದಿಯಲ್ಲಿದ್ದ ಟೀ ಶಾಪ್‍ಗೆ ನುಗ್ಗಿ ಅಲ್ಲಿದ್ದವರ ಮೇಲೆ ಹರಿದು ನಂತರ ಪಲ್ಟಿಯಾಯಿತು. ಈ ದುರ್ಘಟನೆಯಲ್ಲಿ ಏಳು ಮಂದಿ ಮೃತಪಟ್ಟು, ಕೆಲವರು ಗಾಯಗೊಂಡರು. ಗೋಧಿ ಮೂಟೆಗಳ ಅಡಿ ಸಿಲುಕಿದ್ದ ಕೆಲವರನ್ನು ಸ್ಥಳೀಯರ ನೆರವಿನೊಂದಿಗೆ ಪೊಲೀಸ್
ರಕ್ಷಿಸಿದ್ದಾರೆ.

ಟ್ರಕ್ ಚಾಲಕ ಅತಿ ವೇಗದಿಂದ ವಾಹನ ಚಾಲನೆ ಮಾಡುತ್ತಿದ್ದ ಕಾರಣ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಿಜೆಪಿ ಶಾಸಕ ರಾಜೇಶ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ