
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೃತಪಟ್ಟು ಇಂದಿಗೆ ಒಂದು ವರ್ಷ. ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋಚಿಂದ ಗೃಹ ಸಚಿವ ಅಮಿತ್ ಶಾ ಸೇರಿ ಸಾಕಷ್ಟು ಬಿಜೆಪಿ ನಾಯಕರು ವಾಜಪೇಯಿ ಸಮಾಧಿಗೆ ನಮನ ಸಲ್ಲಿಸಿದರು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವಾಜಪೇಯಿ ಅವರಿಗೆ ಕೊನೆಯ ದಿನಗಳಲ್ಲಿ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. 2018, ಆ.16ರಂದು ಕೊನೆಯುಸಿರೆಳೆದಿದ್ದರು.
ಆರ್ಯ ಕುಮಾರ ಸಭಾ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದವರು ವಾಜಪೇಯಿ. 1929ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್ ಮುಖವಾಣಿ ಪಾಂಚಜನ್ಯದಲ್ಲೂ ಅವರು ಕೆಲಸ ಮಾಡಿದ್ದರು.
1996ರಲ್ಲಿ ವಾಜಪೇಯಿ ಪ್ರಧಾನಿ ಆದರು. ಆದರೆ, ಲೋಕಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ ವಾಜಪೇಯಿ, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದರು. ವಾಜಪೇಯಿ ಕೇವಲ 13 ದಿನಗಳವರೆಗೆ ಮಾತ್ರ ಪ್ರಧಾನಿಯಾಗಿದ್ದರು. 1998 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊನಮ್ಮಿತು. ಕೂಡಲೇ ಎನ್ ಡಿಎ ಮೈತ್ರಿಕೂಟ ರಚಿಸಿದ ಬಿಜೆಪಿ ಅಧಿಕಾರಕ್ಕೆ ಬಂದು ವಾಜಪೇಯಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.