370 ವಿಧಿ ರದ್ದು- ಪಾಕ್ ಮನವಿಯಂತೆ ವಿಶ್ವಸಂಸ್ಥೆಯಲ್ಲಿ ರಹಸ್ಯ ಸಭೆ

ನವದೆಹಲಿ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಈ ಸಂಬಂಧ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರ ವಿಚಾರ ತುಂಬಾ ಸೂಕ್ಷ್ಮವಾದ ವಿಚಾರವಾದ ಕಾರಣ. ಈ ವಿಚಾರ ಕುರಿತು ಆಗಸ್ಟ್ 16ರಂದು ನಾಲ್ಕು ಗೋಡೆಗಳ ಮಧ್ಯೆ ರಹಸ್ಯವಾಗಿ ಚರ್ಚಿಸಲಾಗುವುದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷರು ಹೇಳಿದ್ದಾರೆ ಎನ್ನಲಾಗಿದೆ.

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಹೇಳಿದ್ದಾರೆ. ಈ ಬೆನ್ನಲ್ಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಸಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ