ಉಗ್ರಗಾಮಿಗಳ ದಾಳಿ ಶಂಕೆ ಹಿನ್ನೆಲೆ ನಗರದಾದ್ಯಂತ ಕಟ್ಟೆಚ್ಚರ

ಬೆಂಗಳೂರು,ಆ.17- ಉಗ್ರಗಾಮಿಗಳ ದಾಳಿ ಶಂಕೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ನೋಡಿಕೊಳ್ಳಲಾಗುತ್ತಿದೆ ಎಂದು ನಗರ ಪೆÇಲೀಸ್ ಆಯುಕ್ತ ಭಾಸ್ಕರರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ನಗರದ ಎಲ್ಲಾ ವಿಭಾಗದ ಡಿಸಿಪಿಗಳು, ಎಸಿಪಿಗಳು, ಇನ್‍ಸ್ಪೆಕ್ಟರ್‍ಗಳು ಹಾಗೂ ಇನ್ನಿತರ ಸಿಬ್ಬಂದಿಗಳು ಗಸ್ತಿನಲ್ಲಿದ್ದಾರೆ.ಇಬ್ಬರು ಹೆಚ್ಚುವರಿ ಪೆÇಲೀಸ್ ಆಯುಕ್ತರು ಗಸ್ತಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಕೆಎಸ್‍ಆರ್‍ಪಿ, ಸಿಎಆರ್ ತುಕಡಿಗಳನ್ನು ನಗರದ ಪ್ರಮುಖ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.
ಪ್ರಮುಖ ವೃತ್ತಗಳಲ್ಲಿ ಹಾಗೂ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಲ್ಲ ರಸ್ತೆಗಳಲ್ಲೂ ಸಹ ನಾಕಾಬಂಧಿ ಮಾಡಿ ನಗರಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಪ್ರಮುಖವಾಗಿ ಶಕ್ತಿಕೇಂದ್ರ ವಿಧಾನಸೌಧ, ವಿಕಾಸಸೌಧ, ಕೆಪಿಎಸ್‍ಸಿ, ಹೈಕೋರ್ಟ್, ರಾಜಭವನ, ಮೆಟ್ರೋ, ವಿಮಾನ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳು, ಐಟಿಬಿಟಿ ಕಂಪನಿಗಳು, ಮಾಲುಗಳು, ಸಮುದ್ರ ತೀರ ಪ್ರದೇಶಗಳು, ಪ್ರಸಿದ್ದ ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳು ಸೇರಿದಂತೆ ಮತ್ತಿತರ ಕಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು ಸೂಕ್ತ ಭದ್ರತೆ ಏರ್ಪಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.
ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಪೆÇಲೀಸ್ ಕಂಟ್ರೋಲ್ ರೂಮ್‍ಗೆ ತಿಳಿಸಿ, ಲಾಡ್ಜ್‍ಗಳಿಗೆ ಬರುವ ಪ್ರತಿಯೊಬ್ಬ ವ್ಯಕ್ತಿಯ ಹೆಸರು, ವಿಳಾಸ, ಸೂಕ್ತ ದಾಖಲೆಗಳನ್ನು ಪಡೆದುಕೊಂಡು ಅವರುಗಳಿಗೆ ಕೊಠಡಿಯನ್ನು ನೀಡಬೇಕು ಎಂದು ಅವರು ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ