ಪ್ರವಾಹದಲ್ಲಿ ಮೃತಪಟ್ಟವರಿಗೆ ಮತ್ತು ಸುಷ್ಮಾ ಸ್ವರಾಜ್‍ಗೆ ಬಿಬಿಎಂಪಿಯಿಂದ ಶ್ರದ್ದಾಂಜಲಿ

ಬೆಂಗಳೂರು,ಆ.17- ಪ್ರವಾಹದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮೃತಪಟ್ಟವರಿಗೆ ಮತ್ತು ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪಾಲಿಕೆ ವಿಶೇಷ ಸಭೆಯಲ್ಲಿಂದು ಶ್ರದ್ದಾಂಜಲಿ ಸಲ್ಲಿಸಲಾಯಿತು.

ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಹಿರಿಯ ಸದಸ್ಯರಾದ ಉಮೇಶ್ ಶೆಟ್ಟಿ, ಡಾ.ರಾಜು ಮತ್ತಿತರರು ಸುಷ್ಮಾ ಸ್ವರಾಜ್ ಅವರ ಗುಣಗಾನ ಮಾಡಿ ಅವರು ವಿದೇಶಾಂಗ ಸಚಿವರಾಗಿದ್ದಾಗ ಮಾಡಿದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಪದ್ಮನಾಭರೆಡ್ಡಿ ಮತ್ತು ಅಬ್ದುಲ್ ವಾಜಿದ್ ಮಾತನಾಡಿ ನೆರೆ ಸಂತ್ರಸ್ತರಿಗೆ ಪಾಲಿಕೆ ಸದಸ್ಯರ ಒಂದು ತಿಂಗಳ ಗೌರವಧನದ ಜತೆಗೆ ಐದು ಕೋಟಿ ಅಥವಾ ಹತ್ತು ಕೋಟಿ ರೂ.ಗಳನ್ನಾದರು ಪರಿಹಾರಧನವಾಗಿ ನೀಡಬೇಕೆಂದು ಒತ್ತಾಯಿಸಿದರು.
ಮೇಯರ್ ಗಂಗಾಂಬಿಕೆ ಮಾತನಾಡಿ, ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗಂವತ ನೀಡಲಿ ಎಂದು ಪ್ರಾರ್ಥಿಸಿದರು.
ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು, ಅತ್ಯುತ್ತಮ ಕೆಲಸ ಮಾಡಿದ್ದಾರೆ.ಅವರ ಅಗಲಿಕೆ ನೋವು ತಂದಿದೆ ಎಂದು ಹೇಳಿದರು.
ಮೃತರ ಗೌರವಾರ್ತ ಒಂದು ನಿಮಿಷ ಮೌನ ಆಚರಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ