ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣ-ಸಿಬಿಐ ತನಿಖೆ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ತನಿಖೆ ನಡೆಸಲಿ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಉಡುಪಿ,ಆ.18-ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐ ತನಿಖೆ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ತನಿಖೆ ಬೇಕಾದರೂ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ತನಿಖೆ ಎದುರಿಸಲು ನಾವು ಸಿದ್ದ. ಯಾವುದೇ ಕದ್ದಾಲಿಕೆ ಮಾಡಿಲ್ಲ. ಸಿಬಿಐ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದ ತನಿಖೆ ನಡೆಸಲಿ ಅದಕ್ಕೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಕುಮಾರಸ್ವಾಮಿ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ