ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಮುಂಬೈ, ಆ.19– ಮಹಾರಾಷ್ಟ್ರದಲ್ಲಿ ಧುಳೆಯ ನಿಮ್ಗುಲ್ ನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 14 ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಧುಳೆಯ ನಿಮ್ಗುಲ್‍ನಲ್ಲಿ ಹೆದ್ದಾರಿಯಲ್ಲಿದ್ದ ಟ್ರಕ್ ಗೆ ಹಿಂದಿನಿದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಇಡೀ ಬಸ್ ಛಿದ್ರವಾಗಿದೆ.

ಬಸ್‍ನಲ್ಲಿ ಪ್ರಯಾಣಿಕರ ಪೈಕಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧುಳೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಬಸ್ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ