ತನಿಖೆ ನೆಪದಲ್ಲಿ ರಾಜಕೀಯ ದ್ವೇಷ ಸಾಧಿಸಬಾರದು-ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು, ಆ.19-ಟೆಲಿಪೋನ್ ಕದ್ದಾಲಿಕೆ ಪ್ರಕರಣದಲ್ಲಿ ಯಾವುದೇ ಪೂರ್ವಾಗ್ರಹ ಪೀಡಿತರಾಗಿರದೆ ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ ತನಿಖೆ ನೆಪದಲ್ಲಿ ಕೆಲವರನ್ನಷ್ಟೇ ಗುರಿಯಾಗಿಸಿಕೊಂಡು ರಾಜಕೀಯ ದ್ವೇಷ ಸಾಧಿಸಬಾರದು.

ಯಡಿಯೂರಪ್ಪ ಅವರು ತಾವು ರಾಜಕೀಯ ದ್ವೇಷ ಮಾಡುವುದಿಲ್ಲ ಎಂದು ಈ ಮೊದಲು ಹೇಳಿದ್ದರು.ಅದರಂತೆ ನಡೆದುಕೊಳ್ಳಬೇಕು. ಆದರೆ ಇತ್ತೀಚೆಗೆ ಅವರ ನಡವಳಿಕೆಗಳು ಸಂಪೂರ್ಣ ತಿರುಗುಮುರುಗಾಗಿವೆ. ಟೆಲಿಪೋನ್ ಕದ್ದಾಲಿಕೆಯಲ್ಲಿ ಅಕ್ರಮಗಳಾಗಿದ್ದರೆ ತನಿಖೆಗೆ ನಮ್ಮ ಆಕ್ಷೇಪಗಳಿಲ್ಲ. ಆದರೆ ಕೆಲವರನ್ನಷ್ಟೇ ಗುರಿಯಾಗಿಸಿಕೊಂಡು ನಡೆಯಬಾರದು.

ಕುದುರೆ ವ್ಯಾಪಾರ ಸೇರಿದಂತೆ ಎಲ್ಲಾ ರೀತಿಯ ಅಂಶಗಳು ತನಿಖೆಯ ಚೌಕಟ್ಟಿಗೆ ಒಳಪಡಬೇಕು ಎಂದು ಒತ್ತಾಯಿಸಿದರು.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಇದರಿಂದ ಆಡಳಿತ ಯಂತ್ರ ಕುಸಿದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ