ಎನ್‍ಆರ್‍ಐಗಳು ಆರ್ಥಿಕ ಬಲವರ್ಧನೆಗೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು- ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ವಿಲ್‍ನ್ಯೂಸ್(ಲಿತುವೇನಿಯಾ), ಆ.19- ವಿದೇಶಗಳಲ್ಲಿ ಅನಿವಾಸಿ ಭಾರತೀಯರು (ಎನ್‍ಆರ್‍ಐಗಳು) ಆರ್ಥಿಕ ಬಲವರ್ಧನೆಗೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕೆಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಲುತುವೇನಿಯಾ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ರಾಜಧಾನಿ ವಿಲ್‍ನ್ಯೂಸ್‍ನಲ್ಲಿ ಅನಿವಾಸಿ ಭಾರತೀಯರು ಮತ್ತು ಭಾರತೀಯ ಮೂಲದ ಉದ್ಯಮಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಭಾರತ ಮತ್ತು ಲುತುವೇನಿಯಾ ನಡುವೆ ಬಹು ಹಿಂದಿನಿಂದಲೂ ಉತ್ತಮ ಬಾಂಧವ್ಯವಿದೆ. ಆ ದೇಶದ ಎಲ್ಲಾ ಕ್ಷೇತ್ರದ ಅಭಿವೃದ್ಧಿಗಾಗಿ ಭಾರತವೂ ಹಿಂದಿನಿಂದಲೂ ಅಗತ್ಯವಾದ ಎಲ್ಲಾ ನೆರವು ನೀಡುತ್ತಲೇ ಬಂದಿದೆ ಎಂದು ಹೇಳಿದರು.

ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ನಮ್ಮ ದೇಶದ ಸಾಂಸ್ಕøತಿಕ ರಾಯಭಾರಿಗಳೂ ಆಗಿದ್ದಾರೆ. ಇದೇ ವೇಳೆ ಭಾರತದ ಸಂಸ್ಕøತಿ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಮತ್ತಷ್ಟು ಸದೃಢಗೊಳಿಸಲು ಎನ್‍ಆರ್‍ಐಗಳು ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ವೆಂಕಯ್ಯನಾಯ್ಡು ಸಲಹೆ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ