ಛಾಯಗ್ರಾಹಕರಿಗೆ ಜೀವನದ ಭದ್ರತೆ ಅವಶ್ಯಕವಾಗಿದೆ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.19-ಛಾಯಾಗ್ರಾಹಕರಿಗೆ ಹೆಲ್ತ್ ಕಾರ್ಡ್ ಹಾಗೂ ಸಂಘಕ್ಕೆ ಧನಸಹಾಯ ನೀಡುವ ಬಗ್ಗೆ ಅಧಿಕಾರಿ ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭರವಸೆ ನೀಡಿದರು.

ಪತ್ರಕರ್ತರ ಭವನದಲ್ಲಿ ಪೋಟೋ ಜನರಲಿಸ್ಟ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ವಿಶ್ವ ಪೋಟೋಗ್ರಫಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಛಾಯಾಗ್ರಾಹಕರು ತಮ್ಮ ವೃತ್ತಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿರುವುದು ತಿಳಿದಿರುವಂತಹ ವಿಷಯ.ಛಾಯಾಚಿತ್ರ ತೆಗೆಯಲು ತಮ್ಮ ಜೀವವನ್ನೂ ಲೆಕ್ಕಿಸದೆ ಮುನ್ನುಗ್ಗುತ್ತಾರೆ. ಅವರಿಗೆ ಜೀವನದ ಭದ್ರತೆ ಅವಶ್ಯಕವಾಗಿದೆ ಎಂದು ಹೇಳಿದರು.

ಛಾಯಾಗ್ರಾಹಕರು ತೆಗೆಯುವ ಚಿತ್ರಗಳು ಶಾಶ್ವತವಾಗಿ ಉಳಿದು ಮುಂದಿನ ಪೀಳಿಗೆಗೆ ಸ್ಮರಣೀಯವಾಗುತ್ತದೆ. ನಿಮ್ಮ ಕೊಡುಗೆ ಅಪಾರವಾಗಿದ್ದು, ನಿಮ್ಮ ಸಂಘಕ್ಕೆ ನೆರವು ನೀಡಲು ಪಕ್ಷಾತೀತವಾಗಿ ಎಲ್ಲಾ ನಾಯಕರು ಪ್ರಯತ್ನಿಸುವುದಾಗಿ ಭರವಸೆ ನೀಡಿ ವಿಶ್ವಛಾಯಾಗ್ರಾಹಕರ ದಿನಾಚರಣೆಗೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್, ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ