ಕೆಪಿಸಿಸಿಯ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿ ವಿ.ಎಸ್.ಉಗ್ರಪ್ಪ

ಬೆಂಗಳೂರು, ಆ.20- ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನು ಕೆಪಿಸಿಸಿಯ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕೆಪಿಸಿಸಿಯ ಮಾಧ್ಯಮ ವಿಭಾಗಕ್ಕೆ ಈವರೆಗೂ ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಅವರು ಹೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳದ ಹಿನ್ನೆಲೆಯಲ್ಲಿ ಹುದ್ದೆಯಿಂದ ತೆಗೆದು ಹಾಕಿದ್ದು, ವಿ.ಎಸ್.ಉಗ್ರಪ್ಪ ಅವರನ್ನು ನೇಮಿಸಲಾಗಿದೆ. ಈವರೆಗೂ ಕೆಪಿಸಿಸಿ ವಕ್ತಾರರಾಗಿ ಉಗ್ರಪ್ಪ ಕೆಲಸ ಮಾಡುತ್ತಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ