ಉತ್ತರಕಾಶಿ, ಆ.21- ಭಾರೀ ಮಳೆ ಮತ್ತು ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪರಿಹಾರ ಮತ್ತು ರಕ್ಷಣೆಗೆ ಧಾವಿಸಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿದ್ದ ಮೂವರ ಬಗ್ಗೆ ಮಾಹಿತಿ ಲಭಿಸಿಲ್ಲ.
ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸಲು ಮತ್ತು ನೆರೆಪೀಡಿತರ ರಕ್ಷಣೆಗಾಗಿ ಧಾವಿಸಿದ್ದ ಹೆಲಿಕಾಪ್ಟರ್ ಮೋಲ್ಡಿ ಪ್ರದೇಶದ ಬಳಿ ಪತನಗೊಂಡಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ದಳ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.