ಬೆಂಗಳೂರು, ಆ.21- ಬಿಬಿಎಂಪಿ ದಕ್ಷಿಣ ವಲಯದ ಆರೋಗ್ಯಾಧಿಕಾರಿಗಳು ಇಂದು ದಿಢೀರ್ ಕಾರ್ಯಾಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡರು.
ಲಾಲ್ಬಾಗ್ ಪಶ್ಚಿಮ ದ್ವಾರದ ಆರ್.ವಿ.ರಸ್ತೆಯ ಮಾವಳ್ಳಿ ಸುತ್ತಮುತ್ತ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದ, ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಬಿಬಿಎಂಪಿ ದಕ್ಷಿಣ ವಲಯ ಆರೋಗ್ಯ ಅಧಿಕಾರಿ ಮನೋರಂಜನ್ ಹೆಗಡೆ ನೇತೃತ್ವದಲ್ಲಿ ದಾಳಿ ಮಾಡಲಾಯಿತು.
ಆರ್.ವಿ.ರಸ್ತೆಯ ಶ್ರೀ ವಿನಾಯಕ ಆಂಡ್ ಕಂಪನಿಯಲ್ಲಿ ಸಿದ್ದಪಡಿಸಲಾಗಿದ್ದ ಪಿಒಪಿ ಗಣೇಶಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡರು.ಬಹಳಷ್ಟು ಮಳಿಗೆಗಳಲ್ಲಿ ನಾವು ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದಿಲ್ಲ. ತಯಾರು ಮಾಡುದಿಲ್ಲ ಎಂಬ ಬೋರ್ಡ್ ಹಾಕಿಕೊಂಡಿದ್ದರೂ ಪಿಒಪಿ ಗಣೇಶ ಮೂರ್ತಿಗಳನ್ನೇ ಮಾರಾಟ ಮಾಡುತ್ತಿದ್ದುದು ಕಂಡು ಬಂದಿತು.
ತಕ್ಷಣ ಎಲ್ಲೆಡೆ ಪಿಒಪಿ ಗಣೇಶಮೂರ್ತಿಗಳನ್ನು ವಶಕ್ಕೆ ಪಡೆದ ಆರೋಗ್ಯ ಅಧಿಕಾರಿಗಳು ಮಣ್ಣಿನ ಗಣೇಶಮೂರ್ತಿಗಳನ್ನು ಮಾತ್ರ ಮಾರಾಟ ಮಾಡಬೇಕು. ಇಲ್ಲದಿದ್ದರೆ ಲೈಸನ್ಸ್ ರದ್ದು ಪಡಿಸಲಾವುದು ಎಂದು ಖಡಕ್ ಎಚ್ಚರಿಕೆ ನೀಡಿದರು.