ವರಿಷ್ಠರ ಜೊತೆ ಚರ್ಚಿಸಿ ಖಾತೆ ಹಂಚಿಕೆ

ಬೆಂಗಳೂರು, ಆ.22- ವರಿಷ್ಠರ ಜೊತೆ ಚರ್ಚಿಸಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ನಾನು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಷಾ ಸೇರಿದಂತೆ ಮತ್ತಿತರರನ್ನು ಭೇಟಿಯಾಗುತ್ತೇನೆ. ಈ ವೇಳೆ ನೂತನ ಸಚಿವರಿಗೆ ಖಾತೆನೀಡುವ ಸಂಬಂಧ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಚಿವರು ಪ್ರವಾಸ ನಡೆಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವವರಿಗೆ ಸರ್ಕಾರ ಎಲ್ಲಾರೀತಿಯ ನೆರವು ನೀಡಲಿದೆ. ಯಾರೊಬ್ಬರೂ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

ಕೇಂದ್ರದಿಂದ ನಮಗೆ ಎಲ್ಲಾ ರೀತಿಯ ನೆರವು ಸಿಗುತ್ತದೆ. ಒಂದೆರಡು ದಿನಗಳಲ್ಲಿ ಕೇಂದ್ರ ಅಧ್ಯಯನ ತಂಡ ಆಗಮಿಸುವ ಸಾಧ್ಯತೆ ಇದೆ. ಅತಿ ಶೀಘ್ರದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರ ಹಣ ಬಿಡುಗಡೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ವಸತಿ ರಹಿತರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ