ಬೆಂಗಳೂರು, ಆ.22- ರಾಜ್ಯದಲ್ಲಿ 70 ಲಕ್ಷದಷ್ಟು ಕೋಲಿ ಗಂಗಾ ಮತಸ್ಥ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಗಂಗ ಮತಸ್ಥರ ಸಂಘ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮೌಲಾಲಿ ಅವರು ಕೋಲಿ ಸಮಾಜ ಹಿಂದುಳಿದ ವರ್ಗವಾಗಿದ್ದು , ರಾಜಕೀಯ ಮತ್ತು ಶೈಕ್ಷಣಿಕವಾಗಿ ಇದುವರೆಗೂ ಯಾವುದೇ ಸೂಕ್ತ ಸ್ಥಾನಮಾನ ದೊರೆತಿಲ್ಲ.
ಹೀಗಾಗಿ ನಮ್ಮ ಸಮಾಜದವರಾದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಾಸಕ ಲಾಲ್ ಜಿ ಮೆಂಡನ್, ಬಾಬುರಾವ್ ಚಿಂಚನಸೂರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಈ ಇಬ್ಬರು ಮುಖಂಡರು ಆರ್ಎಸ್ಎಸ್ ಮತ್ತು ಎಬಿವಿಪಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.ರವಿಕುಮಾರ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.
ಅವರ ಜತೆಗೆ ಶಾಸಕರಾದ ಬಾಬುರಾವ್ ಚಿಂಚನಸೂರ್ ಕೂಡ ಪಕ್ಷಕ್ಕಾಗಿ ದುಡಿದಿದ್ದಾರೆ.ಗುಲ್ಬರ್ಗ ಲೋಕಸಭಾ ಹಾಗೂ ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ.
ಸರ್ವ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಈ ಮೂವರಿಗೆ ಸಚಿವ ಸ್ಥಾನ ನೀಡುವ ಮೂಲಕ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಮೌಲಾಲಿ ಒತ್ತಾಯಿಸಿದ್ದಾರೆ.