ಮಿತಿ ಮೀರುತ್ತಿರುವ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯ

ಬೆಂಗಳೂರು, ಆ.22-ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಯನ್ನು ರಚಿಸಿದರೂ ಸಹ ಮಕ್ಕಳ ಮತ್ತು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಆಜಾದ್ ಸೇನೆ ಆರೋಪಿಸಿದೆ.

ಸುದ್ದಿಗೋಷ್ಟಿಯಲ್ಲಿ ಸೇನೆಯ ಅಧ್ಯಕ್ಷ ಸುಭಾಷ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ಶೋಷಣೆ, ದೌರ್ಜನ್ಯ ಮಿತಿ ಮೀರುತ್ತಿದೆ. ಅದರಲ್ಲೂ ಕುಟುಂಬದ ಸದಸ್ಯರೇ ಲೈಂಗಿಕ ಶೋಷಣೆ ಮಾಡುತ್ತಿರುವುದರಿಂದ ಇನ್ನಷ್ಟು ಆತಂಕವು ಹೆಚ್ಚಾಗಿದೆ ಎಂದು ತಿಳಿಸಿದರು .

ಅದರಿಂದ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆಯನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮಕ್ಕಳು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ವಿಚಾರಣೆ ನಡೆಸುವ ನ್ಯಾಯಾಲಯದಲ್ಲಿ ಇತರೆ ಕೇಸುಗಳಿಗೆ ಅವಕಾಶ ಕಲ್ಪಿಸದೆ ಮಕ್ಕಳ ಮಹಿಳೆಯರು ಮೇಲೆ ಲೈಂಗಿಕ ಶೋಷಣೆ ದೌರ್ಜನ್ಯ ಕೇಸುಗಳನ್ನಷ್ಟೇ ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ