ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸ

ಬೆಂಗಳೂರು, ಆ.22-ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಜನಮನ ಸಂಸ್ಥೆಯು ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸವನ್ನು ಏರ್ಪಡಿಸಿದೆ.

ನಾಳೆ ಸಂಜೆ 5.30ಕ್ಕೆ ಶಿವಾನಂದ ಸರ್ಕಲ್ ಬಳಿ ಇರುವ ಗಾಂಧಿಭವನದಲ್ಲಿ ಈ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಐತಿಹಾಸಿಕ ನಿರ್ಧಾರದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕೇಂದ್ರ ಸರ್ಕಾರ ತೆಗೆದುಕೊಂಡ ತೀರ್ಮಾನ ಕುರಿತಂತೆ ಬಿ.ಎಲ್.ಸಂತೋಷ್ ಅವರು 370ನೇ ವಿಧಿ ರದ್ಧತಿ ಭಾರತಾಂಬೆಯ ಕಿರೀಟ-ಕಾಶ್ಮೀರ ವಿಶೇಷ ಉಪನ್ಯಾಸ ನೀಡುವರು.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜನಮನ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎ.ಎಚ್.ಆನಂದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.9902122951, 9686671267 ಹಾಗೂ 7795606060 ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ