ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯನವರು ಕಾರಣ-ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ

ಬೆಂಗಳೂರು, ಆ.23- ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರ ವರ್ತನೆಗಳು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೇಸರ ತಂದಿತ್ತು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದಲ್ಲಿರುವುದು ಸಹಿಸಲು ಆಗುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.

ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಇಳಿಸಬೇಕೆಂಬ ತೀರ್ಮಾನ ಕೈಗೊಂಡಿದ್ದರಿಂದ ಮೈತ್ರಿ ಸರ್ಕಾರ ಪತನಗೊಂಡಿತು. ಸರ್ಕಾರ ಪತನವಾಗಲು ಸಿದ್ದರಾಮಯ್ಯನವರು ಕಾರಣವೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದನ್ನು ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ಕಾಂಗ್ರೆಸ್‍ನವರ ಕಿರುಕುಳದಿಂದ ಬೇಸತ್ತು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು, ಮಾಜಿ ಪ್ರಧಾನಿ ದೇವೇಗೌಡರ ಮುಂದೆ ಕಣ್ಣೀರು ಹಾಕಿ ರಾಜೀನಾಮೆ ಕೊಡುವುದಾಗಿ ಹೇಳಿದ್ದರು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ