ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು

ಬೆಂಗಳೂರು, ಆ.23- ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ 3 ಸಚಿವ ಸ್ಥಾನ ನೀಡಬೇಕೆಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ಟ್ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಜಗದ್ಗುರು ಪ್ರಸನ್ನಾನಂದ ಪುರಿ ಸ್ವಾಮೀಜಿ, ನಮ್ಮ ಸಮುದಾಯ 40 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ್ದರೂ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡುವ ಮೂಲಕ ಅನ್ಯಾಯ ಮಾಡಲಾಗಿತ್ತು.

ಅದೇ ರೀತಿ ಇಂದಿನ ಬಿಜೆಪಿ ಸರ್ಕಾರ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ಸಂದರ್ಭದಲ್ಲಿ ಬಿಜೆಪಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಬಹಿರಂಗವಾಗಿ ನೀಡಿತ್ತು.

ಈ ಹಿನ್ನಲೆಯಲ್ಲಿ ಮಾತು ಉಳಿಸಿಕೊಂಡು ಪ್ರಸ್ತುತ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ನಮ್ಮ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ 3 ಸಚಿವ ಸ್ಥಾನಗಳನ್ನು ನೀಡುವಂತೆ ಆಗ್ರಹಿಸಿದರು.

ಯುವ ಸೇನೆಯ ರಾಜ್ಯಾಧ್ಯಕ್ಷ ಸಿರಿಗೆರೆ ತಿಪ್ಪೇಶ್, ಟ್ರಸ್ಟ್‍ನ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ರಾಜಣ್ಣ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ