ಬೆಂಗಳೂರು, ಆ. 25-ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ -2019ನ್ನು ಇದೇ 28ರ ಬುಧವಾರ ಬೆಳಗ್ಗೆ 11.30ಕ್ಕೆ ಕಬ್ಬನ್ ಉದ್ಯಾನವನದ ಎನ್‍ಜಿಒ ಹಾಲ್‍ನಲ್ಲಿ ಆಯೋಜಿಸಲಾಗಿದೆ.
ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಒಕ್ಕಲಿಗರ ಹಿತರಕ್ಷಣಾ ಪರಿಷತ್ ಕೆಂಪೇಗೌಡರ ಜಯಂತ್ಯೋತ್ಸವ, ಗ್ರಂಥ ಲೋಕಾರ್ಪಣೆ, ನಾಡಪ್ರಭು ಕೆಂಪೇಗೌಡರ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಸಮಾರಂಭವನ್ನು ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಂಡಿದೆ.
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಕುಮಾರಚಂದ್ರಶೇಖರನಾಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮವನ್ನು ಸ್ಪಟಿಕಪುರಿ ಮಹಾಸಂಸ್ಥಾನದ ಮಠದ ಶ್ರೀ ನಂಜಾವದೂತ ಸ್ವಾಮೀಜಿ ಉದ್ಘಾಟಿಸುವರು, ಸಂಸದ ಬಿ.ಎನ್.ಬಚ್ಚೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮೇಯರ್ ಗಂಗಾಂಬಿಕೆ, ಒಕ್ಕಲಿಗರ ಹಿತರಕ್ಷಣಾ ಪರಿಷತ್‍ನ ಗೌರವ ಪೆÇೀಷಕರಾದ ರಾಮಚಂದ್ರಗೌಡ, ನಂದಿದುರ್ಗದ ಬಾಲುಗೌಡ ಮತ್ತಿತರರು ಪಾಲ್ಗೊಳ್ಳುವರು.
ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ, ಸಚಿವ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಎಸ್.ರಘು, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಗಳಾದ ಶರತ್ ಬಚ್ಚೇಗೌಡ ಮತ್ತು ಸಪ್ತಗಿರಿಗೌಡ, ಉಪಮೇಯರ್ ಭದ್ರೆಗೌಡ, ಬೆಂಗಳೂರು ವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್, ಅಭಿಮಾನಿ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಟಿ.ವೆಂಕಟೇಶ್ವ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತಿತರರು ಪಾಲ್ಗೊಳ್ಳುವರು.