ಜನರ ನಿರೀಕ್ಷೆಗಳು ಏನೇ ಇರಲಿ, ನಾನು ಪಕ್ಷದ ತೀರ್ಮಾನಕ್ಕೆ ಬದ್ಧ: ಶ್ರೀರಾಮುಲು

ನವದೆಹಲಿ: ಜನರ ನಿರೀಕ್ಷೆಗಳು ಏನೇ ಇರಬಹುದು. ನಾವು ಕೂಡಾ ಪಕ್ಷದ ಒಂದು ಭಾಗ. ಹಾಗಾಗಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಬಿಜೆಪಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಡಿಸಿಎಂ ಆಗಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಸುದ್ದಿ ಹರಿದಾಡುತಿದೆ. ವೈಯಕ್ತಿಕವಾಗಿ ನನಗೆ ಆಸೆಗಳಿರಬಹುದು. ಆದರೆ ನಾನು ಪಾರ್ಟಿ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಈ ವಿಚಾರದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ನಿರ್ಧಾರವೇ ಅಂತಿಮ ನಿರ್ಧಾರ. ಪಕ್ಷಕ್ಕಾಗಿ ಕಾಯ ವಾಚ ಮನಸ್ಸು ಕೆಲಸ ಮಾಡುತ್ತೇವೆ. ಸ್ಥಾನಮಾನಕ್ಕೆ ರಾಜಕೀಯ ಮಾಡಿಲ್ಲ, ಸಿದ್ಧಾಂತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ನಮ್ಮ ಆಸೆಗಳನ್ನು ಕುಗ್ಗಿಸಿಕೊಳ್ಳಬೇಕಾಗುತ್ತೆ ಎಂದು ಹೇಳಿದರು.

ಅನರ್ಹ ಶಾಸಕ ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಕೊಟ್ಟರೂ ಪಾರ್ಟಿ ತೀರ್ಮಾನಕ್ಕೆ ನಾನು ಬದ್ಧ. ನಮ್ಮ ಸ್ವಾರ್ಥಕ್ಕಾಗಿ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಬಾರದು. 100% ಪಕ್ಷಕ್ಕಾಗಿ ನಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಹೇಳಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ