ರಾಜ್ಯದಲ್ಲಿ 40 ಪ್ರವಾಸಿ ತಾಣಗಳ ಅಭಿವೃದ್ಧಿ

ಬೆಂಗಳೂರು, ಆ.26-ವಿಶ್ವದಲ್ಲೇ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಹೊಂದಿರುವ ರಾಜ್ಯದಲ್ಲಿ 40 ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸುಮಾರು 65 ಲಕ್ಷ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಖಾಸಗಿ ಹೊಟೇಲ್‍ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಇಂಟರ್‍ನ್ಯಾಷನಲ್ ಟ್ರಾವೆಲ್‍ಎಕ್ಸ್‍ಪೆÇೀ-2019 ಉದ್ಘಾಟಿಸಿ ಮಾತನಾಡಿದ ಅವರು, 2020ರ ವೇಳೆಗೆ 40 ಪ್ರವಾಸಿತಾಣಗಳನ್ನು ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 20 ತಾಣಗಳನ್ನು ವಿಶ್ವಮಟ್ಟದಲ್ಲಿ ಅಭಿವೃದ್ಧಿಪಡಿಸಿ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವುದಾಗಿ ತಿಳಿಸಿದರು.

2020ರ ವೇಳೆಗೆ 20 ಪ್ರವಾಸಿತಾಣಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಇನ್ಫೋಸಿಸ್‍ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾನಾರಾಯಣಮೂರ್ತಿ ಅವರನ್ನು ಇದಕ್ಕಾಗಿಯೇ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಯಿಂದ 65 ಲಕ್ಷ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

ದೇಶದ ಜಿಡಿಪಿ ಅಭಿವೃದ್ಧಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಶೇ.4.8ರಷ್ಟು ಕೊಡುಗೆ ನೀಡುತ್ತಿದ್ದೇವೆ. ಪ್ರತಿವರ್ಷ ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ವಿಶ್ವದಲ್ಲೇ ಕರ್ನಾಟಕ ಅತ್ಯುತ್ತಮ ಪ್ರವಾಸಿತಾಣವಾಗಿದೆ ಎಂದು ಪ್ರಶಂಸಿಸಿದರು.
ಬಾದಾಮಿ, ಪಟ್ಟದಕಲ್ಲು ಸೇರಿದಂತೆ ಮೂರು ತಾಣಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲಾಗಿದೆ.ರಾಜ್ಯದಲ್ಲಿ ಮನಸೆಳೆಯುವ ವನ್ಯಜೀವಿ ತಾಣಗಳು, ಮನೋಹರ ನಿಸರ್ಗ ತಾಣಗಳು, ಕಣ್ಮನ ಸೆಳೆಯುವ ಬೀಚ್‍ಗಳು ಸೇರಿದಂತೆ ಪ್ರವಾಸಕ್ಕೆ ಪೂರಕವಾದ ಸವಲತ್ತುಗಳನ್ನು ಕಲ್ಪಿಸಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಿಎಂ ಮನವಿ ಮಾಡಿದರು.

ಮೂರು ದಿನಗಳ ಕಾಲ ನಡೆಯಲಿರುವ ಕರ್ನಾಟಕ ಇಂಟರ್‍ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೆÇೀದಲ್ಲಿ ರಾಜ್ಯದ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಅಂಗೈಯಲ್ಲೇ ಸಿಗಲಿದೆ. ಪ್ರತಿವರ್ಷ ಬಜೆಟ್‍ನಲ್ಲೂ ಪ್ರವಾಸೋದ್ಯಮ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದೇವೆ. ಇನ್ನು ಹೆಚ್ಚಿನ ಸ್ಥಳಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಕರ್ನಾಟಕವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದರು ಹೇಳಿದರು.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾ ನಾರಾಯಣಮೂರ್ತಿ ಮಾತನಾಡಿ, ಕರ್ನಾಟಕ ವಿಶ್ವದಲ್ಲೇ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಹೊಂದಿದೆ.ದೇಶದ ಯಾವುದೇ ಭಾಗದಲ್ಲೂ ಇರದ ವಿಶ್ವದರ್ಜೆಯ ತಾಣಗಳು ನಮ್ಮಲ್ಲಿರುವುದು ಪ್ರಶಂಸನೀಯ.ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯ್‍ಭಾಸ್ಕರ್, ಕೆಎಸ್‍ಟಿಡಿಸಿಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್, ಟೂರಿಸಂ ಸೊಸೈಟಿ ಅಧ್ಯಕ್ಷ ಕೆ.ಶ್ಯಾಮರಾಜು ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ