ಜಮಖಂಡಿ, ಆ.27-ಬಿಜೆಪಿಯಲ್ಲಿ ಈಗ ಬಿ.ಎಲ್.ಸಂತೋಷ್ ಅವರೇ ಸುಪ್ರೀಂ ಹೀರೋ. ಬಿ.ಎಸ್.ಯಡಿಯೂರಪ್ಪನವರು ತುಂಬಾ ಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಬಿಜೆಪಿಯವರ ಷಡ್ಯಂತ್ರದಿಂದಲೇ ಯಡಿಯೂರಪ್ಪನವರು ಜೈಲಿಗೆ ಹೋಗಬೇಕಾಯಿತು. ಈಗ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ.ಈಗಲೂ ಜೈಲಿಗೆ ಹೋಗುವ ಭಯ ಅವರಿಗೆ ಕಾಡುತ್ತಿದೆ ಎಂದು ಹೇಳಿದರು.
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಪ್ರಧಾನಿ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅವರ್ಯಾರಿಗೂ ಇಷ್ಟವಿರಲಿಲ್ಲ. ಆದರೂ ಅವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಸಂಪುಟ ವಿಸ್ತರಣೆ ಖಾತೆ ಹಂಚಿಕೆಯಲ್ಲಿ ಅಸಮಾಧಾನ ಉಂಟಾಗಿದೆ.