ನವದೆಹಲಿ, ಆ.28- ಕಾಶ್ಮೀರವು ಭಾರತದ ಆಂತರಿಕ ವಿಷಯ. ಇದರಲ್ಲಿ ಪಾಕಿಸ್ತಾನ ಅಥವಾ ಇತರ ಯಾವುದೇ ದೇಶಗಳಿಗೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಮತ್ತು ಸಂಸದ ರಾಹುಲ್ಗಾಂಧಿ ಹೇಳಿದ್ದಾರೆ.
ಟ್ವಿಟರ್ನಲ್ಲಿ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಪಾಕಿಸ್ಥಾನ ಕುಮ್ಮಕ್ಕು ನೀಡುತ್ತಿದೆ ಎಂದು ಆಪಾಧಿಸಿದ್ದಾರೆ.
ಕೇಂದ್ರ ಸರ್ಕಾರದ ಅನೇಕ ವಿಷಯಗಳ ಬಗ್ಗೆ ನನಗೆ ಅಸಮ್ಮತಿ ಇದೆ. ಆದರೆ ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಮತ್ತು ಇದು ನಮ್ಮ ದೇಶದ ಆಂತರಿಕ ವಿಷಯ ಎಂಬುದಕ್ಕೆ ನನ್ನ ಸಂಪೂರ್ಣ ಸಹಮತ ಮತ್ತು ಬೆಂಬಲವಿದೆ. ಈ ವಿಷಯದಲ್ಲಿ ಪಾಕಿಸ್ತಾನವಾಗಲಿ ಅಥವಾ ಇನ್ನಾವುದೇ ರಾಷ್ಟ್ರವಾಗಲಿ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದ್ದಾರೆ.