ಸೆ.4ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಬೆಂಗಳೂರು, ಆ.28-ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಬಿಬಿಎಂಪಿ ವತಿಯಿಂದ ಸೆಪ್ಟೆಂಬರ್ ನಾಲ್ಕರಂದು ಆಚರಿಸಲಾಗುತ್ತದೆ.
ಕಳೆದ ಏಪ್ರಿಲ್‍ನಲ್ಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕಿತ್ತು.ಆದರೆ, ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಲೋಕಸಭೆ ಚುನಾವಣೆ ಮುಗಿದು ಸರ್ಕಾರ ಅಸ್ತಿತ್ವಕ್ಕೆ ಬಂದಾಯಿತು.ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ಕಳೆದುಕೊಂಡು ಈಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಪೇಗೌಡರ ಜಯಂತಿ ಆಚರಿಸುವಂತೆ ಆದೇಶಿಸಿದ್ದಾರೆ. ಹಾಗಾಗಿ ಸೆ.4ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತದೆ.
ಎ.ಜೆ.ಸದಾಶಿವ ಸಮಿತಿ 70 ಮಂದಿ ಸಾಧಕರನ್ನು ಕೆಂಪೇಗೌಡ ಪ್ರಶಸ್ತಿಗೆ ಶಿಫಾರಸು ಮಾಡಿದ್ದು, ಅಂದು ಸಂಜೆ ಪಾಲಿಕೆಯಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಸಾಧಕರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ