ಕಸದ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ-ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್

 

ಬೆಂಗಳೂರು, ಆ.31-ಕಸದ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್ ಭರವಸೆ ನೀಡಿದರು.
ಪಾಲಿಕೆ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಬಿಎಂಪಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಹೀಗಾಗಿ ಕಸದ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡುತ್ತೇನೆ. ಎಲ್ಲ ಸದಸ್ಯರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಹಿಂದೆ ಪ್ರತಿ ಶನಿವಾರ ಆಯಾ ವಲಯಗಳಲ್ಲಿ ಕಸದ ಸಮಸ್ಯೆ ಆಲಿಸಲಾಗುತ್ತಿತ್ತು. ಇನ್ನು ಮುಂದೆ ನಾನು ಇದೇ ಪದ್ಧತಿ ಮುಂದುವರಿಸಲು ತೀರ್ಮಾನಿಸಿದ್ದೇನೆ ಎಂದರು.
ನೂತನ ಆಯುಕ್ತರಿಗೆ ಮೇಯರ್ ಗಂಗಾಂಬಿಕೆ, ಉಪಮೇಯರ್ ಭದ್ರೇಗೌಡ ಮತ್ತಿತರರು ಕೆಎಂಸಿ ಕಾಯ್ದೆ ಪುಸ್ತಕ ನೀಡಿ ಸ್ವಾಗತಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ