ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಚಿವರನ್ನು ನೇಮಕಕ್ಕೆ ಒತ್ತಾಯ

ಬೆಂಗಳೂರು,ಆ.31- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕೂಡಲೇ ಸಚಿವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಯುವಮುನ್ನಡೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್ ಮಾತನಾಡಿ, ಯಾವುದೇ ಸರ್ಕಾರಗಳು ರಚನೆಯಾದರು ಶೇ.30ರಷ್ಟು ಜನಸಂಖ್ಯೆ ಯುವಜನರೇ ತುಂಬಿದ್ದಾರೆ.ಆದರೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಚಿವರನ್ನು ನೇಮಕ ಮಾಡಲು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದರು.
ಬಜೆಟ್ ಹಂಚಿಯ ಸಂದರ್ಭದಲ್ಲೂ ಸಹ ಯುಜನತೆಗೆ ನಿರ್ಲಕ್ಷ್ಯ ಎದ್ದು ಕಾಣುತ್ತದೆ ದೇಶದ ಆಸ್ತಿ ಎಂದು ಪರಿಗಣಿಸಲ್ಪಡುವ ಯುವ ಜನತೆಗೆ 200 ಅಥವಾ 300 ಕೋಟಿ ಮಾತ್ರ ಅನುದಾನವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಸಮಸ್ಯೆಗಳಿಂದಲೇ ತುಂಬಿರುವ ಸಮಾಜದಲ್ಲಿ ಯುವಜನತೆ ಕೂಡ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ.ಅದರಿಂದ ಯುವಜನರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತಿವರ್ಷ 10ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಬೇಕು.ಯುವಜನ ಆಯೋಗ ಸ್ಥಾಪಿಸಬೇಕು ಮತ್ತು ಯುವಜನರ ಹಕ್ಕುಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಬೇಕು ಹಾಗೂ ಯುವ ಜನತೆಯ ಸಮಸ್ಯೆಗಳನ್ನು ಅರಿತು ನಿಭಾಯಿಸಬಲ್ಲ ಯೋಗ್ಯ ವ್ಯಕ್ತಿಗೆ ಸಚಿವ ಸ್ಥಾನ ನೀಡಬೇಕು ಎಂದು ಚಂದ್ರಶೇಖರ್ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ