ಸದನದಲ್ಲೇ ನೀಲಿ ಚಿತ್ರ ವೀಕ್ಷಣೆ ಮಾಡಿದ್ದ ಹಿನ್ನಲೆ-ಲಕ್ಷ್ಮಣ್ ಸವದಿಯವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೈ ಬಿಡಬೇಕು

ಬೆಂಗಳೂರು, ಆ.31-ವಿಧಾನಸೌಧದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ ಮಾಜಿ ಶಾಸಕ ಲಕ್ಷ್ಮಣ್ ಸವದಿ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೈ ಬಿಡಬೇಕೆಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಇಂದು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಾ ಅಮರನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು.ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ಹಿಂದೆ ಸಚಿವರಾಗಿದ್ದಾಗ ಲಕ್ಷ್ಮಣ್ ಸವದಿಯವರು ಸದನದಲ್ಲೇ ನೀಲಿ ಚಿತ್ರ ವೀಕ್ಷಣೆ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಜನ ಅವರನ್ನು ತಿರಸ್ಕರಿಸಿ ಮನೆಗೆ ಕಳುಹಿಸಿದ್ದಾರೆ. ಅಂಥವರನ್ನು ಮತ್ತೆ ಸಚಿವರನ್ನಾಗಿ ಮಾಡಿ, ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.ಇದರಿಂದ ಹೆಣ್ಣು ಮಕ್ಕಳು ಬಿಜೆಪಿ ಅಗೌರವಿಸಿದೆ.ಸದನದ ಪಾವಿತ್ರ್ಯತೆ ಹಾಳು ಮಾಡಿದ ಸವದಿ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು.ಸವದಿ ಅವರಿಗೆ ನೈತಿಕತೆ ಇದ್ದರೆ ತಾವೇ ಖುದ್ದಾಗಿ ರಾಜೀನಾಮೆ ಸಲ್ಲಿಸಬೇಕು.ಸವದಿ ಅವರು ಸಂಪುಟದಿಂದ ಹೊರ ಹೋಗುವವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ. ಇಂದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಎಲ್ಲಾ ಹೆಣ್ಣು ಮಕ್ಕಳು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಎಚ್ಚರಿಸಿದರು.

ಕಾಡುಮಲ್ಲೇಶ್ವರ ದೇವಾಲಯದಿಂದ ಬಿಜೆಪಿ ಕಚೇರಿಯವರೆಗೂ ಕಾಂಗ್ರೆಸ್ ನಾಯಕಿಯರು ಮೆರವಣಿಗೆ ನಡೆಸಿದರು.ಕಚೇರಿ ಮುಂದೆ ಕೆಲಕಾಲ ಘೋಷಣೆ ಕೂಗಿ ಪ್ರತಿಭಟಿಸಿದರು. ನಂತರ ಪೆÇಲೀಸರು ಕಾರ್ಯಕv

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ