
ಹೊಸದಿಲ್ಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ನಿನ್ನೆ ರಾತ್ರಿವರೆಗೂ ನಡೆದ ವಿಚಾರಣೆ ಬಳಿಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಗೌರಿ-ಗಣೇಶ ಹಬ್ಬದ ದಿನವಾದ ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದಾರೆ.
ಶುಕ್ರವಾರ ಸಂಜೆಯಿಂದ ವಿಚಾರಣೆಗೆ ಒಳಗಾಗಿರುವ ಡಿಕೆ ಶಿವಕುಮಾರ್ ಸೋಮವಾರ ಹಬ್ಬ ಇರುವುದರಿಂದ ಮಂಗಳವಾರ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಆದರೆ ಈ ಮನವಿಯನ್ನು ಇಡಿ ಅಧಿಕಾರಿಗಳು ತಿರಸ್ಕರಿಸಿದ್ದು, ಸೋಮವಾರವೇ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.