ರಾಜಕೀಯ ದುರುದ್ದೇಶದಿಂದ ಡಿ.ಕೆ.ಶಿವಕುಮಾರ್ ಮೇಲೆ ಕೇಸ್-ಮಾಜಿ ಸಚಿವ ಚೆಲುವರಾಯಸ್ವಾಮಿ

ನವದೆಹಲಿ, ಸೆ.1-ರಾಜಕೀಯ ದುರುದ್ದೇಶದಿಂದ ಡಿ.ಕೆ.ಶಿವಕುಮಾರ್ ಮೇಲೆ ಕೇಸ್ ಹಾಕಿದ್ದಾರೆ. ಗುಜರಾತ್ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ಟಾರ್ಗೆಟ್ ಮಾಡಿದ್ದಾರೆ. ಅವರು ಎಲ್ಲವನ್ನು ಧೈರ್ಯವಾಗಿ ಎದುರಿಸಲಿದ್ದಾರೆ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ನವದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ವಕ್ತಾರರಂತೆ ವರ್ತಿಸುತ್ತಿದ್ದಾರೆ. ಶ್ರೀರಾಮುಲು, ಗೋವಿಂದಕಾರಜೋಳ ಅವರ ಹೇಳಿಕೆಯನ್ನು ಗಮನಿಸಿದರೆ ಗೊತ್ತಾಗುತ್ತದೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಧೈರ್ಯವಾಗಿದ್ದಾರೆ.ಕಾನೂನು ಹೋರಾಟ ನಡೆಸುತ್ತಾರೆ.ಅದರಲ್ಲಿ ಯಶಸ್ವಿಯಾಗುತ್ತಾರೆ ಎಂದು ತಿಳಿಸಿದರು.

ದೇಶದಲ್ಲಿ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ಅದನ್ನು ಮರೆಮಾಚಲು ಕೇಂದ್ರ ಹೀಗೆ ಮಾಡುತ್ತಿದೆ ಎಂದು ಚೆಲುವರಾಯಸ್ವಾಮಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ