
ಬೆಂಗಳೂರು, ಸೆ.01-ರಾಜಧಾನಿ ಬೆಂಗಳೂರು ನಗರದಲ್ಲಿ 2400ಕ್ಕೂ ಹೆಚ್ಚು ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ-ಸಂಸ್ಥೆಗಳು ಹಾಗೂ ಇನ್ನಿತರ ಸಂಘಟನೆಗಳು ನಗರದ ವಿವಿಧೆಡೆ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಿವೆ. ಎಲ್ಲಾ ಕಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
ಇನ್ಸ್ಪೆಕ್ಟರ್ಗಳು, ಎಸಿಪಿಗಳು ಗಸ್ತಿನಲ್ಲಿರುತ್ತಾರೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಶುಭಾಶಯ: ಇದೇ ವೇಳೆ ರಾಜ್ಯದ ಜನತೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರರಾವ್ ಅವರು ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.