ಹಬ್ಬ ಆಚರಿಸಲು ಡಿ.ಕೆ.ಶಿವಕುಮಾರ್‍ರವರಿಗೆ ಕಾಲಾವಕಾಶ ನೀಡಲು ಇಡಿ ನಿರಾಕರಣೆ-ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ

ಬೆಂಗಳೂರು, ಸೆ.1- ಗೌರಿ-ಗಣೇಶ ಹಬ್ಬ ಆಚರಿಸಲು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಅವಕಾಶ ನೀಡದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದೂಗಳಿಗೆ ಗೌರಿ-ಗಣೇಶ ಹಬ್ಬ ಪ್ರಮುಖವಾದದ್ದು.ಈ ಹಬ್ಬ ಆಚರಿಸಲು ಡಿ.ಕೆ.ಶಿವಕುಮಾರ್ ಅವರು ಒಂದು ದಿನದ ಕಾಲಾವಕಾಶ ನೀಡುವಂತೆ ಕೋರಿದ್ದರೂ ಇಡಿ ಅಧಿಕಾರಿಗಳು ನಿರಾಕರಿಸಿದ್ದಾರೆ.ಇದು ಪ್ರತಿಕಾರದ ಮನೋಭಾವನೆ ಅಲ್ಲವೇ ಎಂದು ಅವರು ಟ್ವಿಟ್ಟರ್‍ನಲ್ಲಿ ಪ್ರಶ್ನಿಸಿದ್ದಾರೆ.
ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ:
ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಟ್ವಿಟ್ಟರ್ ಮೂಲಕ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿರುವ ಅವರು ವಿಘ್ನ ವಿನಾಶಕನಾದ ಗಣೇಶನು ಎಲ್ಲರ ಬಾಳಲ್ಲೂ ಸುಖ-ಸಂತೋಷ ಸಮೃದ್ಧಿ ತರಲಿ ಎಂದು ಹಾರೈಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ